ಮಹಿಳೆಯರೇ ನಡೆಸುತ್ತಿರುವ ರಾಜ್ಯದ ಏಕೈಕ ಮಹಿಳಾ ಮಾಸಿಕ ಅನುಪಮ ಮಾಸಿಕಕ್ಕೆ 25 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ 25 ವರ್ಷಗಳ ಯಶಸ್ಸಿನ ಹಿನ್ನೋಟವಿರುವ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಗುರುವಾರ ಬಿಡುಗಡೆ ಮಾಡಿದರು. ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಪತ್ರಿಕೋದ್ಯಮದಲ್ಲಿ ಮುಸ್ಲಿಂ ಮಹಿಳೆಯರು ಬೆರಳೆಣಿಕೆಯಷ್ಟು ಮಾತ್ರ ಇದ್ದಾರೆ. ಈ ನಡುವೆ ಕೂಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ ಸಮುದಾಯದ ಮಹಿಳೆಯರೇ ನಡೆಸುತ್ತಿರುವ ಅನುಪಮ ಮಹಿಳಾ ಮಾಸಿಕವು 25 ವರ್ಷಗಳನ್ನು ಪೂರೈಸಿರುವುದು ಶ್ಲಾಘನೀಯ”ಎಂದು ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಅನುಪಮ […]



























