ನಮಸ್ಕಾರ ಬಂಧುಗಳೇ, ನಾನು ಶಿಕ್ಷಕಿಯಾಗಬೇಕೆಂದು ನಮ್ಮ ಅಮ್ಮ ಆಸೆಪಟ್ಟಿದ್ರು. ಹಾಗಾಗಿ ಓದು-ಬರಹ ಕಲಿಯಲು ಕಷ್ಟ ಎನಿಸಿದರೂ ಸಹ ಅಮ್ಮನ ಒಂದೇ ಒಂದು ಆಸೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿತ್ತು. ಮುಕ್ಕಾಲು ಭಾಗ ಅಂಧತ್ವವನ್ನು ಹೊತ್ತು ಹುಟ್ಟಿದ ನನಗೆ ಸಾಮಾನ್ಯ ವಿದ್ಯಾರ್ಥಿಗಳು ಅಧ್ಯಯನ ಮಾಡುವ ಶಾಲೆಗೆ ನನ್ನನ್ನು ದಾಖಲಿಸಿದರು. ನನ್ನ ಕಲಿಕೆಯೇ ಅಲ್ಲಿ ಆಗುತ್ತಿರಲಿಲ್ಲ. ಕಾರಣ ಕಪ್ಪುಹಲಗೆಯ ಅಕ್ಷರಗಳು ನನಗೆ ಕಾಣುತ್ತಿರಲಿಲ್ಲ. ಅಕ್ಕ ಪಕ್ಕದ ವಿದ್ಯಾರ್ಥಿಗಳು ಸಹಾಯ ಮಾಡುತ್ತಿರಲಿಲ್ಲ. ಬದಲಾಗಿ ಆಡಿಕೊಳ್ಳುತ್ತಿದ್ದರು, ಛೇಡಿಸುತ್ತಿದ್ದರು. ಶಿಕ್ಷಕರು ನಮ್ಮ ತಂದೆ ತಾಯಿಗಳಿಗೆ […]



