‘ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದ್ದು, ಮತಗಳ್ಳರು ಮತ್ತು ಪ್ರಜಾಪ್ರಭುತ್ವ ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ. ಇಂದಿರಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಚುನಾವಣಾ ಆಯೋಗವು ಇದನ್ನು ಮೊದಲು ನಿಲ್ಲಿಸಬೇಕು. ಮತದಾರರ ಹೆಸರು ಅಳಿಸಿಹಾಕಿದ್ದರ ಕುರಿತು ಕರ್ನಾಟಕ ಸಿಐಡಿ ಕೇಳಿರುವ ಮಾಹಿತಿಯನ್ನು ಚುನಾವಣಾ ಆಯೋಗವು ತಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು. ‘ದೇಶದಲ್ಲಿ […]











