ಮಂಗಳೂರು: ವಿದ್ಯಾರ್ಥಿನಿಯನ್ನು ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರೊಂದಿಗೆ ಸ್ನೇಹಿತನನ್ನು ಮಾರತ್ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.19 ವರ್ಷದ ಸಂತ್ರಸ್ತೆ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಕಾಲೇಜಿನ ಭೌತವಿಜ್ಞಾನ ವಿಭಾಗದ ಉಪನ್ಯಾಸಕ ನರೇಂದ್ರ, ಜೀವವಿಜ್ಞಾನ ವಿಭಾಗದ ಉಪನ್ಯಾಸಕ ಸಂದೀಪ್ ಹಾಗೂ ಅವರ ಸ್ನೇಹಿತ ಬೆಂಗಳೂರು ನಿವಾಸಿ ಅನೂಪ್ ಬಂಧಿತರು.‘ಘಟನೆಯು ಕೆಲವು ತಿಂಗಳ ಹಿಂದೆ ನಡೆದಿತ್ತು. ಆರೋಪಿಗಳ ಬ್ಲ್ಯಾಕ್ಮೇಲ್ ಹೆಚ್ಚಾದ ಮೇಲೆ ಮಹಿಳಾ ಆಯೋಗಕ್ಕೆ ಕಳೆದ […]





